ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಕ್ಲಚ್ ಸಮಸ್ಯೆಯಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಥಾರ್ ಕಾರು ಮಂಗಳವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಾಲೇನಹಳ್ಳಿ ಗ್ರಾಮದ ಸಮೀಪ ಸುಮಾರು 3 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಥಾರ್ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾದರೂ, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿರುವುದು ಸಮಾಧಾನಕರ ಸಂಗತಿ.
ಸ್ಥಳೀಯರ ಪ್ರಯತ್ನ ವಿಫಲ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ
ಕಾರಿಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅದನ್ನು ನಂದಿಸಲು ಪ್ರಯತ್ನಿಸಿದರು. ಆದರೆ, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ ಕಾರಣ ನಿಯಂತ್ರಣ ಸಾಧ್ಯವಾಗಲಿಲ್ಲ. ಬೆಂಕಿಯಿಂದ ದಟ್ಟವಾದ ಕಪ್ಪು ಹೊಗೆ ಆವರಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಇದರಿಂದಾಗಿ ವಾಹನಗಳ ಭಾರಿ ದಟ್ಟಣೆ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು.
ಪೊಲೀಸರಿಂದ ಪರಿಶೀಲನೆ
ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ಹೆದ್ದಾರಿ ಸಹಾಯವಾಣಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಆದರೆ ಅಷ್ಟರೊಳಗೆ ಥಾರ್ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ಘಟನೆ ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
04/02/2026 08:42 am
LOADING...