ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಇಂದು 12 ಜನರಿಗೆ ಶಿಕ್ಷೆ ಪ್ರಕಟ

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ಬೆಳಗಾವಿಯ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಈ ಕುರಿತು ಮಹತ್ವದ ತೀರ್ಪು ಪ್ರಕಟಿಸಲಿದೆ.

ಘಟನೆಯ ಹಿನ್ನೆಲೆ

2023ರ ಡಿಸೆಂಬರ್ 11ರಂದು ವಂಟಮೂರಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿತ್ತು. ಪ್ರೀತಿಸಿದ ಯುವತಿಯೊಂದಿಗೆ ಯುವಕನೊಬ್ಬ ಮನೆ ಬಿಟ್ಟು ಪರಾರಿಯಾಗಿದ್ದನು. ಇದರಿಂದ ಕೆರಳಿದ ಯುವತಿಯ ಕುಟುಂಬಸ್ಥರು, ಯುವಕನ ಮನೆಗೆ ನುಗ್ಗಿ ಧ್ವಂಸಗೊಳಿಸಿದ್ದರು. ಅಷ್ಟೇ ಅಲ್ಲದೆ, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ತನಿಖೆ ಮತ್ತು ತೀರ್ಪು

ಘಟನೆ ಸಂಬಂಧ, ಒಬ್ಬ ಬಾಲಾಪರಾಧಿ ಸೇರಿದಂತೆ ಒಟ್ಟು 13 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಸುದೀರ್ಘ ಎರಡು ವರ್ಷಗಳ ಕಾಲ ನಡೆದ ವಿಚಾರಣೆಯ ನಂತರ, ಈ ಪ್ರಕರಣದ 12 ಆರೋಪಿಗಳು ತಪ್ಪಿತಸ್ಥರೆಂದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಇಂದು ಈ 12 ಜನ ಆರೋಪಿಗಳಿಗೆ ನ್ಯಾಯಾಲಯವು ಶಿಕ್ಷೆ ಪ್ರಕಟಿಸಲಿದೆ.

Edited By : Manjunath H D
PublicNext

PublicNext

04/02/2026 09:24 am

Cinque Terre

4.44 K

Cinque Terre

0

ಸಂಬಂಧಿತ ಸುದ್ದಿ