ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್ - ಪೋಷಕರೇ ಚಿಂತೆ ಬಿಡಿ, ಚಾಕಲೇಟ್ ಕೇಸ್‌ನಲ್ಲಿ ಪೊಲೀಸರ ಅಭಯ!

ಹುಬ್ಬಳ್ಳಿ: ಹುಬ್ಬಳ್ಳಿಯ ಬಮ್ಮಾಪುರ ಓಣಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳಿಗೆ ಬುರ್ಕಾ ಧರಿಸಿದ ಮಹಿಳೆಯೊಬ್ಬರು ಚಾಕಲೇಟ್ ನೀಡಿ ತಕ್ಷಣವೇ ಅಲ್ಲಿಂದ ತೆರಳುತ್ತಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೋಷಕರಲ್ಲಿ ಭಯ ಸೃಷ್ಟಿಸಿತ್ತು.

ಪೊಲೀಸರಿಂದ ತನಿಖೆ ಹಾಗೂ ಭರವಸೆ

ಪಬ್ಲಿಕ್ ನೆಕ್ಸ್ಟ್‌ನಲ್ಲಿ ಈ ಕುರಿತು ವರದಿ ಪ್ರಕಟವಾದ ಕೂಡಲೇ ಗಂಟಿಕೇರಿ ಪೊಲೀಸರು ತನಿಖೆ ಕೈಗೊಂಡು, ಚಾಕಲೇಟ್ ನೀಡಿದ್ದ ಮಹಿಳೆಯನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ, ಯಾರೂ ಕೂಡ ಭಯಪಡುವ ಅಗತ್ಯವಿಲ್ಲ ಎಂದು ಗಂಟಿಕೇರಿ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಎ. ಜಾಧವ್ ಅವರು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ಪೋಷಕರು ಮತ್ತು ಮಕ್ಕಳಿಗೆ ನಿರ್ಭಯದ ಕರೆ

ಇನ್ಸ್‌ಪೆಕ್ಟರ್ ಬಿ.ಎ. ಜಾಧವ್ ಅವರು ಪಬ್ಲಿಕ್ ನೆಕ್ಸ್ಟ್‌ಗೆ ಮಾಹಿತಿ ನೀಡಿ, ಪೋಷಕರು ಮತ್ತು ಮಕ್ಕಳು ಯಾವುದೇ ಭಯವಿಲ್ಲದೆ ನಿರ್ಭಯವಾಗಿರಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅವರು ಮತ್ತೊಮ್ಮೆ ತಿಳಿಸಿದ್ದಾರೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/02/2026 09:42 am

Cinque Terre

13.24 K

Cinque Terre

0

ಸಂಬಂಧಿತ ಸುದ್ದಿ