ಶಿವಮೊಗ್ಗ : ಕಳೆದ 13 ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ವ್ಯಕ್ತಿಯನ್ನು ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಹುಬ್ಬಳ್ಳಿ ಮಂಟೂರ್ ರಸ್ತೆಯ ಅರಳಿಕಟ್ಟಿ ಕಾಲನಿ ನಿವಾಸಿ ಗುರುರಾಜ್ ಯಲ್ಲಪ್ಪ ಕುರುಬರ ಅಲಿಯಾಸ್ ಜಾಫರ್ ಖಾನ್(42) ಬಂಧಿತ. 2013ರಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಆತ ಜಾಮೀನಿನ ಮೇಲೆ ಹೊರಬಂದಿದ್ದ. ಆದರೆ ಕಳೆದ 13 ವರ್ಷಗಳಿಂದ ಆತ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ ಆತನ ವಿರುದ್ಧ ಶಿಕಾರಿಪುರದ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಬಂಧನದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Kshetra Samachara
04/02/2026 12:15 pm
LOADING...