ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮೊರಾರ್ಜಿ ದೇಸಾಯಿ ಶಾಲೆಯಿಂದ ಕಾಣೆಯಾದ ಬಾಲಕ ಪತ್ತೆ ! ಪ್ರಾಚಾರ್ಯರೇ ಎಚ್ಚರ

ಕುಂದಗೋಳ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಕಾಣೆಯಾಗಿದ್ದ ಬಾಲಕನನ್ನು ಪತ್ತೆ ಹಚ್ಚುವಲ್ಲಿ ಗುಡಗೇರಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಯಶಸ್ವಿಯಾಗಿದ್ದು, ಶಾಲೆ ಪ್ರಾಚಾರ್ಯರು ನಿರಾಳರಾಗಿದ್ದಾರೆ.

ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ವಾಸವಿದ್ದ 15 ವರ್ಷದ ಬಾಲಕ ಜನವರಿ 23 ರಂದು ಹಾಸ್ಟೆಲ್'ನಿಂದ ಕಾಣೆಯಾದ ಬಗ್ಗೆ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಭಾರಿ ಪ್ರಾಚಾರ್ಯರಾದ ಆಶಾ ದೊಡ್ಡಗೌಡ್ರ ದೂರು ದಾಖಲಿಸಿದ್ದರು.

ಈ ಬಗ್ಗೆ ಶಾಲೆಯ ಪ್ರಾಚಾರ್ಯರು ಪಾಲಕರು ಬಾಲಕರನ್ನು ಯಾರೋ ಪುಸಲಾಯಿಸಿ ಅಪಹರಣ ಮಾಡಿದ ಬಗ್ಗೆ ಸಂಶಯ ವ್ಯಕ್ತಪಡಿಸಿ ಜನವರಿ 24 ರಂದು ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆ ಪಿ‌‌.ಎಸ್.ಐ ಪ್ರವೀಣ್ ನೇಸರ್ಗಿ ನೇತೃತ್ವದಲ್ಲಿ ಅಧಿಕಾರಿಗಳು ಬಾಲಕನನ್ನು ಪತ್ತೆ ಹಚ್ಚಿದ್ದು ದೇವಸ್ಥಾನಕ್ಕೆ ತೆರಳಿದ್ದ ಎಂಬ ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಭದ್ರತೆ ಮತ್ತು ಮಕ್ಕಳ ಚಲನವಲನಗಳ ಬಗ್ಗೆ ಪ್ರಾಚಾರ್ಯರು ಹಾಗೂ ವಾರ್ಡನ್' ಹೆಚ್ಚಿನ ಕಾಳಜಿ ಕೈಗೊಳ್ಳುವ ಬಗ್ಗೆ ಈ ಪ್ರಕರಣ ಎಚ್ಚರಿಕೆ ಗಂಟೆಯಾಗಿದೆ.

ಶ್ರೀಧರ್ ಪೂಜಾರ, ಪಬ್ಲಿಕ್ ನೆಕ್ಸ್ಟ್, ಕುಂದಗೋಳ

Edited By : Manjunath H D
Kshetra Samachara

Kshetra Samachara

04/02/2026 02:18 pm

Cinque Terre

5.78 K

Cinque Terre

0

ಸಂಬಂಧಿತ ಸುದ್ದಿ