ಉಧಮ್‌ಪುರ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಉಧಮ್‌ಪುರದ ಬಸಂತ್‌ಗಢ ಪ್ರದೇಶದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್ ಪಾಲ್ಗೊಂಡಿದ್ದವು. ಭಯೋತ್ಪಾದಕರು ಗುಹೆಯೊಂದರಲ್ಲಿ ಅಡಗಿಕೊಂಡಿದ್ದರು. ಆರಂಭಿಕ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಗಾಯಗೊಂಡಿದ್ದನು ಎಂದು ವರದಿಯಾಗಿದ್ದು, ನಂತರ ಇಬ್ಬರೂ ಅದೇ ಗುಹೆಯೊಳಗೆ ಆಶ್ರಯ ಪಡೆದಿದ್ದರು.
PublicNext
04/02/2026 03:31 pm
LOADING...