ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಜಕೀಯ ವಾತಾವರಣ ತೀವ್ರಗೊಂಡಿದ್ದು, ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ನಡುವೆ ನೇರ ವಾಗ್ವಾದ ನಡೆದಿದೆ.
ಸಂಸತ್ ಭವನದ ಆವರಣದಲ್ಲಿ ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆ, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. "ದೇಶದ್ರೋಹಿ" ಎಂಬ ಪದದ ಬಳಕೆಯು ಈ ವಿವಾದಕ್ಕೆ ಕಾರಣವಾಗಿದ್ದು, ಎರಡೂ ಪಕ್ಷಗಳ ನಡುವೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರಂತರವಾಗಿ ವಿವಾದಗಳಿಗೆ ಸಿಲುಕುತ್ತಿದ್ದಾರೆ. ಇದೀಗ ಕೇಂದ್ರ ಸಚಿವ ರವನೀತ್ ಸಿಂಗ್ ಅವರನ್ನು 'ದೇಶದ್ರೋಹಿ' ಎಂದು ಕರೆದಿರುವುದು ಮತ್ತೊಂದು ವಾಗ್ವಾದಕ್ಕೆ ಕಾರಣವಾಗಿದ್ದು, ಇದಕ್ಕೆ ರವನೀತ್ ಸಿಂಗ್ ಕೂಡ ತೀವ್ರ ತಿರುಗೇಟು ನೀಡಿದ್ದಾರೆ. ರವನೀತ್ ಸಿಂಗ್ ಬಿಟ್ಟು ಅವರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸಂಸದರ ಸಮೀಪ ಹಾದುಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
PublicNext
04/02/2026 04:24 pm
LOADING...