ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಐಷಾರಾಮಿ ಜೀವನಶೈಲಿಯನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಧರಿಸುವ ಶಾಲಿನ ಬೆಲೆ ₹2.5 ಲಕ್ಷವಾದರೆ, ತಾನು ಕೇವಲ ₹150 ಬೆಲೆಯ ಶಾಲು ಹಾಕುತ್ತೇನೆ ಎಂದು ಹೇಳುವ ಮೂಲಕ ಅಶೋಕ್ ವ್ಯಂಗ್ಯವಾಡಿದ್ದಾರೆ.
ನಿನ್ನೆ ನಡೆದ ವಿಧಾನಸಭೆ ಅಧಿವೇಶನದಲ್ಲಿ 'ಬ್ರ್ಯಾಂಡ್ ಬೆಂಗಳೂರು' ಕುರಿತ ಚರ್ಚೆ ವೇಳೆ ಈ ವಿಷಯ ಪ್ರಸ್ತಾಪವಾಗಿದೆ. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ವಿಪಕ್ಷ ನಾಯಕ ಆರ್. ಅಶೋಕ್ ಆಡಿದ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. "ಡಿಕೆಶಿ ಶಾಲು ಎರಡುವರೆ ಲಕ್ಷ, ನನ್ನ ಶಾಲಿನ ಬೆಲೆ ₹150" ಎಂಬ ಅಶೋಕ್ ಅವರ ಹೇಳಿಕೆ ಇದೀಗ ಎಲ್ಲೆಡೆ ವೈರಲ್ ಆಗಿದೆ.
PublicNext
04/02/2026 04:56 pm
LOADING...