ಮೂಡಿಗೆರೆ : ತಾಲೂಕಿನ ಮುಗ್ರಹಳ್ಳಿ ಗ್ರಾಮದಲ್ಲಿ ಗೋಹತ್ಯೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಮುಗ್ರಹಳ್ಳಿ ಗ್ರಾಮದಿಂದ ಪಿಕಪ್ ವಾಹನವೊಂದರಲ್ಲಿ ದನಗಳನ್ನು ಕಳ್ಳತನ ಮಾಡಿ ಬೇಲೂರಿನ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಮೂಡಿಗೆರೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ಸರ್ಕಲ್ ಪಿಎಸ್ಐ ಹಾಗೂ ಸಿಬ್ಬಂದಿ ತಂಡವು ಪಿಕಪ್ ವಾಹನವನ್ನು ತಡೆದು ತಪಾಸಣೆ ನಡೆಸಿದೆ. ಈ ವೇಳೆ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಐದು ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಜಾನುವಾರುಗಳನ್ನು ರಕ್ಷಿಸಿ, ಆರೋಪಿಗಳಾದ ಸುಂದ್ರೇಶ್ ಮತ್ತು ಮಲ್ಲೇಶ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಅಕ್ರಮ ಸಾಗಾಟಕ್ಕೆ ಬಳಸಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಲಾಗಿದ್ದು, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಸಮಯೋಚಿತ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
PublicNext
04/02/2026 06:54 pm
LOADING...