ಮೂಡಿಗೆರೆ: ಧರ್ಮ ಮತ್ತು ನಂಬಿಕೆಯ ಹೆಸರಿನಲ್ಲಿ ಯುವತಿಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಗ್ರಾಮದ ಪುರಾತನ ಈಶ್ವರ-ಪಾರ್ವತಿ ದೇವಸ್ಥಾನದ ಅರ್ಚಕ ಕೃಷ್ಣರಾವ್ ಎಂಬಾತ ತನ್ನ ಬಳಿ ಮದುವೆ ವಿಚಾರವಾಗಿ ಜಾತಕ ತೋರಿಸಲು ಬಂದಿದ್ದ 23 ವರ್ಷದ ಯುವತಿಗೆ ಜಾತಕದಲ್ಲಿ ಗಂಭೀರ ದೋಷವಿದೆ ಎಂದು ನಂಬಿಸಿದ್ದಾನೆ. ಈ ದೋಷ ನಿವಾರಣೆಗೆ ವಿಶೇಷ ಪೂಜೆ ಹಾಗೂ 'ತಡೆ' ಹೊಡೆಯಬೇಕು ಎಂದು ಹೆದರಿಸಿದ ಅರ್ಚಕ, 2025ರ ನವೆಂಬರ್ 23 ರಿಂದ 2026ರ ಫೆಬ್ರವರಿ 2ರ ವರೆಗಿನ ಅವಧಿಯಲ್ಲಿ ದೇವಸ್ಥಾನದ ಆವರಣದಲ್ಲಿಯೇ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಅರ್ಚಕನ ಈ ಅಮಾನವೀಯ ಕೃತ್ಯದಿಂದ ನೊಂದ ಯುವತಿ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ ಪೊಲೀಸರು ಆರೋಪಿ ಕೃಷ್ಣರಾವ್‌ನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಅತ್ಯಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆತನನ್ನು ನ್ಯಾಯಾಲಯದ ವಶಕ್ಕೆ ನೀಡಲಾಗಿದೆ. ಭಕ್ತಿ ಮತ್ತು ನಂಬಿಕೆಯಿಂದ ಬಂದವರ ದೌರ್ಬಲ್ಯವನ್ನು ಬಳಸಿಕೊಂಡು ಕಾಮತೃಷೆ ತೀರಿಸಿಕೊಂಡ ಈ ಕೀಚಕ ಅರ್ಚಕನ ನಡೆ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದ್ದು, ಸದ್ಯ ಕಾಮಪಿಶಾಚಿ ಅರ್ಚಕ ಜೈಲುಪಾಲಾಗಿದ್ದಾನೆ.
PublicNext
04/02/2026 07:01 pm
LOADING...