ನವದೆಹಲಿ : ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ.
ದಯವಿಟ್ಟು ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಕೈಮುಗಿದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಇಡೀ ಸದನವೇ ಮೌನಕ್ಕೆ ಶರಣಾದಂತಿತ್ತು!
ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ.
ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ವಿನಂತಿಸಿಕೊಂಡರು. ಮಾತ್ರವಲ್ಲ ನಾನು ಜೀವನದ ಕೊನೆಯ ಘಟ್ಟದಲ್ಲಿದ್ದೇನೆ.
ಮಾನವೀಯತೆಯಿಂದಲಾದರೂ ನನ್ನ ಕರ್ನಾಟಕಕ್ಕೆ ಕುಡಿಯುವ ನೀರು ಕೊಡಿ ಅಂತಾ ಅಂಗಲಾಚಿ ಬೇಡಿಕೊಳ್ಳುವೆ ಎಂದು ಹೇಳಿದಾಗ ಇಡೀ ಸದನದ ಚಿತ್ತ ದೇವೇಗೌಡರತ್ತ ಎಂಬಂತಿತ್ತು.
PublicNext
04/02/2026 10:33 pm
LOADING...