ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ: ಪರಿಸ್ಥಿತಿ ನಿಯಂತ್ರಣದಲ್ಲಿ, ಹೆಚ್ಚುವರಿ ಪೊಲೀಸ್ ಬಂದೋಬಸ್ತ್

ಬೆಂಗಳೂರು: ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ನೀಡಿದರು.

ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಘಟನೆಯ ಹಿನ್ನೆಲೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡಿದ್ದೇವೆ. ಹೀಗಾಗಿ ಜನರು ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಘಟನೆಗೆ ಕಾರಣ ಏನು ಎಂಬುವುದನ್ನು ವಿವರಿಸಿದ ಪರಮೇಶ್ವರ್, 'ಹಿಂದೆ ಇದೇ ಹುಡುಗರು ಗಲಾಟೆ ಮಾಡಿಕೊಂಡಿದ್ದರು. ಮತ್ತೆ ಯಾವ ಕಾರಣಕ್ಕೆ ಘರ್ಷಣೆ ಆಯ್ತು ಅಂತಾ ಗೊತ್ತಾಗಿಲ್ಲ, ಆದ್ರೆ ಹೊಡೆದಾಡಿಕೊಂಡಿದ್ದಾರೆ. ಕೈಯಿಂದ ಎದೆಭಾಗಕ್ಕೆ ಹೊಡೆದ ಪರಿಣಾಮ ಬಾಲಕ ಸಂಕೇತ್ ಮೃತಪಟ್ಟಿದ್ದಾನೆ ಎಂದು ವಿವರಿಸಿದರು.

Edited By : Vinayak Patil
PublicNext

PublicNext

26/02/2026 08:44 am

Cinque Terre

11.27 K

Cinque Terre

0

ಸಂಬಂಧಿತ ಸುದ್ದಿ