ಹಿರಿಯೂರು: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದ BCA ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ವೇದಾವತಿ ನಗರದಲ್ಲಿ ನಡೆದ ಘಟನೆ ನಡೆದಿದೆ. ಸೈಯ್ಯದ್ ಜಿಶಾನ್ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸೆಮಿಸ್ಟರ್ ಪರೀಕ್ಷೆಯಲ್ಲಿ ಒಟ್ಟು 8 ವಿಷಯದಲ್ಲಿ ಫೇಲ್ ಆಗಿದ್ದ.
ಇದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸ್ಥಳಕ್ಕೆ ಹಿರಿಯೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
05/03/2026 10:46 am
LOADING...