ಬಳ್ಳಾರಿ: ಅಂತರಾಷ್ಟ್ರೀಯ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಬಳ್ಳಾರಿ ಮೂಲದ 54 ಮಂದಿ ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ.
ಪ್ರವಾಸಿ ಏಜೆನ್ಸಿಯ ಮೂಲಕ ದುಬೈ ಪ್ರವಾಸ ಕೈಗೊಂಡಿದ್ದ ಈ ಪ್ರವಾಸಿಗರು ಅಲ್ಲಿನ ಪರಿಸ್ಥಿತಿ ತೀವ್ರಗೊಂಡ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಅಲ್ಲೇ ಸಿಲುಕಿಕೊಂಡಿದ್ದರು. ಬಳಿಕ ವಿಮಾನ ಸೇವೆ ಪುನರಾರಂಭವಾದ ನಂತರ ದುಬೈನಿಂದ ಕೊಚ್ಚಿ ಮೂಲಕ ಪ್ರಯಾಣಿಸಿ ನಂತರ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ಪ್ರವಾಸಿಗರನ್ನು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಭರತ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸಿಗರು, ಸಂಕಷ್ಟದ ಸಂದರ್ಭದಲ್ಲಿ ಸಹಾಯ ಮಾಡಿದ ಶಾಸಕ ಬಿ. ನಾಗೇಂದ್ರ, ಸಂಸದ ತುಕರಾಂ ಹಾಗೂ ಭರತ್ ರೆಡ್ಡಿ ಅವರ ಸಹಕಾರವನ್ನು ನೆನೆದು ಕೃತಜ್ಞತೆ ವ್ಯಕ್ತಪಡಿಸಿದರು. ಜೊತೆಗೆ ರಾಜ್ಯ ಸರ್ಕಾರಕ್ಕೂ ಧನ್ಯವಾದ ಸಲ್ಲಿಸಿದರು.
ಅಂತರಾಷ್ಟ್ರೀಯ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಹಿನ್ನೆಲೆಯಲ್ಲಿ ಪ್ರವಾಸಿಗರು ಸಂತಸ ವ್ಯಕ್ತಪಡಿಸಿದರು.
PublicNext
05/03/2026 11:49 am
LOADING...