ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜನೆಯಾಗಿದ್ದು, ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ಭಾಗದ ವಿದ್ಯಾರ್ಥಿಗಳು, ಯುವಕ - ಯುವತಿಯರು ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.

ವಿವಿಧ ಕಂಪನಿಗಳು ಸಹ ಭಾಗಿಯಾಗುತ್ತಿದ್ದು, ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವರು ಭಾಗಿಯಾಗುವ ನಿರೀಕ್ಷೆ ಇದೇ. ಮಧ್ಯಾಹ್ನ 12ಕ್ಕೆ ಕಾರ್ಯಕ್ರಮ ಪ್ರಾರಂಭ ಆಗಲಿದ್ದು, ಸಂಜೆವರೆಗೂ ನಡೆಯಲಿದೆ.

Edited By : Somashekar
PublicNext

PublicNext

05/03/2026 02:35 pm

Cinque Terre

10.43 K

Cinque Terre

0