ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: NH 48ರಲ್ಲಿ ಇಥೇನಾಲ್ ಲಾರಿ ಪಲ್ಟಿ - ಕ್ಷಣಾರ್ಧದಲ್ಲಿ ಹೊತ್ತಿ ಉರಿ, ಸಂಚಾರ ಸ್ತಬ್ಧ!

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ರಾಣೆಬೆನ್ನೂರು ನಗರದ ಹಲಗೇರಿ ಕ್ರಾಸ್ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಥೇನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿ ಭೀಕರವಾಗಿ ಹೊತ್ತಿ ಉರಿದಿದೆ. ಈ ಘಟನೆಯಿಂದಾಗಿ ಹೆದ್ದಾರಿಯಲ್ಲೆಲ್ಲಾ ದಟ್ಟ ಹೊಗೆ ಆವರಿಸಿ ಆತಂಕ ಸೃಷ್ಟಿಯಾಗಿದೆ.

ಘಟನೆ ವಿವರ

ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಚಲಿಸುತ್ತಿದ್ದಾಗ, ನಿಯಂತ್ರಣ ಕಳೆದುಕೊಂಡು ಸರ್ವೀಸ್ ರಸ್ತೆಗೆ ಉರುಳಿಬಿದ್ದಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ, ಅದರಲ್ಲಿ ತುಂಬಿದ್ದ ಇಥೇನಾಲ್ ಕಾರಣದಿಂದ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿಯತೊಡಗಿದೆ.

ಅಗ್ನಿಶಾಮಕ ದಳದ ಕಾರ್ಯಾಚರಣೆ ಹಾಗೂ ಸಂಚಾರ ವ್ಯತ್ಯಯ

ಘಟನೆಯ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ವಾಹನ ಸಂಚಾರದಲ್ಲಿ ಗಂಭೀರ ವ್ಯತ್ಯಯ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿವೆ.

Edited By : Vinayak Patil
PublicNext

PublicNext

05/03/2026 06:02 pm

Cinque Terre

16.86 K

Cinque Terre

0

ಸಂಬಂಧಿತ ಸುದ್ದಿ