ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Karnataka Budget 2026 : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಹೃದಯ ಹಾಗೂ ಫಲವತ್ತತೆ ಚಿಕಿತ್ಸೆಗೆ ಹೊಸ ಶಕ್ತಿ

ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.

ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

Edited By : Nirmala Aralikatti
PublicNext

PublicNext

06/03/2026 12:35 pm

Cinque Terre

27.23 K

Cinque Terre

0

ಸಂಬಂಧಿತ ಸುದ್ದಿ