ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದ್ದು, ಮೈಸೂರು ನಗರವನ್ನು ರಾಜ್ಯದ 2ನೇ ಮಾಹಿತಿ ತಂತ್ರಜ್ಞಾನ (IT) ನಗರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದ್ದಾರೆ.
ಮೈಸೂರು: 2ನೇ ಐಟಿ ನಗರ
ಮೈಸೂರಿನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಪ್ರೋತ್ಸಾಹದ ಪರಿಣಾಮವಾಗಿ, ಪ್ರಸ್ತುತ 100ಕ್ಕೂ ಹೆಚ್ಚು ಕಂಪನಿಗಳಲ್ಲಿ 30 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬೆಳವಣಿಗೆಯನ್ನು ಗುರುತಿಸಿ, ಬಜೆಟ್‌ನಲ್ಲಿ ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ಘೋಷಿಸಲಾಗಿದೆ.
ಏರೋಸ್ಪೇಸ್ ಪಾರ್ಕ್ ಸ್ಥಾಪನೆ
ಇದಲ್ಲದೆ, ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ, ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) ವತಿಯಿಂದ ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
PublicNext
06/03/2026 01:08 pm
LOADING...