ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್ : ರಸ್ತೆ ತಿರುವಿನಲ್ಲೇ ದುರಂತ : ಟ್ರ್ಯಾಕ್ಟರ್ ಪಲ್ಟಿಯಾಗಿ ಪರಶುರಾಮ ಸಾವು

ಹಾನಗಲ್ : ರಸ್ತೆಯ ತಿರುವಿನಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಹಾನಗಲ್ ತಾಲೂಕಿನ ಕಂಚಿನೆಗಳೂರ- ಅರಳೇಶ್ವರ ರಸ್ತೆಯಲ್ಲಿ ನಡೆದಿದೆ.

ಕಂಚಿನೆಗಳೂರ ಗ್ರಾಮದ ಪರಶುರಾಮ ಲಕ್ಷ್ಮಣಗೌಡ ಕಲ್ಲೇಗೌಡರ (43) ಮೃತ ವ್ಯಕ್ತಿಯಾಗಿದ್ದು ಗೋವಿನಜೋಳದ ಮಿಷನ್ ಹೊಂದಿದ ಟ್ರ್ಯಾಕ್ಟರ್ ನಲ್ಲಿ ತೆರಳುವಾಗ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಕೆಳಗೆ ಚಾಲಕ ಸಿಲುಕಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಕುರಿತಂತೆ ಮಾಹಿತಿ ಪಡೆದ ಆಡೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಚಾಲಕನ ಮೃತ ದೇಹವನ್ನು ಹಾನಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ : ಲೋಕೇಶ್ ಸುಣಗಾರ್ ಪಬ್ಲಿಕ್ ನೆಕ್ಸ್ಟ್ ಹಾನಗಲ್

Edited By :
Kshetra Samachara

Kshetra Samachara

07/03/2026 09:55 am

Cinque Terre

10.82 K

Cinque Terre

0

ಸಂಬಂಧಿತ ಸುದ್ದಿ