ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿರುವ ಪ್ರತಿಷ್ಠಿತ ಅಮ್ಯೂಸ್ ಮೆಂಟ್ ಪಾರ್ಕ್ ವೆಲ್ಸ್ ಜಾಲಿವುಡ್ ಸ್ಟುಡಿಯೋದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಹಿಳಾ ದಿನದ ವಿಶೇಷವಾಗಿ ಜಾಲಿವುಡ್ ಸ್ಟುಡಿಯೋದಲ್ಲಿ ಮಹಿಳಾ ಸಿಬ್ಬಂದಿಗಳೇ ಇಡೀ ದಿನದ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಕರ್ನಾಟಕ ಬುಕ್ಸ್ ಆಫ್ ರೆಕಾರ್ಡ್ಸ್ ಗೆ ಸೇರಿಸುವ ಉದ್ದೇಶದಿಂದ ಈ ವಿನೂತನ ಕಾರ್ಯಕ್ರಮ ನಡೆಸಲಾಗಿದೆ.
ಮಹಿಳೆಯರಿಗೆ ಶಕ್ತಿ ತುಂಬುವ ಜೊತೆಗೆ ಲಿಂಗ ಅಸಮಾನತೆಯನ್ನು ತೊಡೆದು ಹಾಕುವ ದೃಷ್ಟಿಯಿಂದ ಈ ಯೋಜನೆ ಹಾಕಿಕೊಳ್ಳಲಾಗಿದೆ. ಮಹಿಳೆಯರು ಸಹ ಪುರುಷರಷ್ಟೇ ಕಾರ್ಯನಿರ್ವಹಣೆ ಮಾಡ್ತಾರೆಂಬ ಸಂದೇಶ ಸಾರಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವನಾಯಕಿ ಕುಸುಮಾ, ಬಿಡದಿ ಪುರಸಭೆಯ ಮುಖ್ಯಾಧಿಕಾರಿ ಮೀನಾಕ್ಷಿ ಸೇರಿದಂತೆ ವೇದಿಕೆಯಲ್ಲಿ ಮಹಿಳೆಯರೇ ಪ್ರಮುಖ ಪಾತ್ರ ವಹಿಸಿದ್ದು ವಿಶೇಷವಾಗಿತ್ತು.
PublicNext
07/03/2026 09:59 am
LOADING...