ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ರಾಜ್ಯ ಬಜೆಟ್ ಜನಪರ ಮತ್ತು ಬಡವರ ಪರ - ಸಂಸದ ಶ್ರೇಯಸ್ ಪಟೇಲ್

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಅತ್ಯಂತ ಜನಪರ ಹಾಗೂ ಬಡವರ ಹಿತ ಕಾಯುವ ಬಜೆಟ್ ಆಗಿದೆ ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ವಿವಿಧ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸುಮಾರು 56 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಎಂದರು. ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, "ಕೇಂದ್ರ ಸರ್ಕಾರವು ರಾಜ್ಯಕ್ಕೆ ಎಷ್ಟು ಯೋಜನೆಗಳನ್ನು ನೀಡಿದೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ. ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಮೊದಲು ಬಿಡುಗಡೆ ಮಾಡಲಿ," ಎಂದು ಸವಾಲು ಹಾಕಿದರು.

Edited By : PublicNext Desk
PublicNext

PublicNext

07/03/2026 07:12 pm

Cinque Terre

24.19 K

Cinque Terre

1

ಸಂಬಂಧಿತ ಸುದ್ದಿ