ಶಿಡ್ಲಘಟ್ಟ : ನಗರದ ರಾಜೀವ್ ಗಾಂಧಿ ಲೇಔಟ್‌ನಲ್ಲಿ ಇರುವ ಎ–1 ಬ್ರಿಕೆಟ್ (ಕಟ್ಟಿಗೆ ಬೂಸು) ಫ್ಯಾಕ್ಟರಿಯಲ್ಲಿ ಶನಿವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.
ಫ್ಯಾಕ್ಟರಿಯಲ್ಲಿ ಕಟ್ಟಿಗೆ ಬೂಸು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ತಿಳಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಭಾರಿ ಹೋರಾಟವನ್ನೇ ನಡೆಸಿದರು.
ಘಟನೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸದಂತೆ ಸ್ಥಳೀಯರು ಹಾಗೂ ಪೊಲೀಸರು ಉರಿಯುತ್ತಿರುವ ಬೆಂಕಿಗೆ ಟ್ಯಾಂಕರ್ ಗಳ ಮೂಲಕ ನೀರನ್ನು ಸುರಿದರು. ಆದರೂ ತಣ್ಣಗಾಗದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು.
-ಚಿಕ್ಕತೇಕಹಳ್ಳಿ ಡಿ.ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
07/03/2026 10:17 pm
LOADING...