ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ರಾಶಿ ಸುಟ್ಟು ಭಸ್ಮ!

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನಲ್ಲಿ ನಡೆದ ದುರದೃಷ್ಟಕರ ಘಟನೆಯೊಂದರಲ್ಲಿ, ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದಾಗಿ ೮ ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳದ ತೆನೆರಾಶಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ನಾಗಪ್ಪ ಬಣಕಾರ, ಸಚೀನ್ ಹೊಸಳ್ಳಿ ಮತ್ತು ಮಾಲತೇಶ್ ದೇಸೂರ ಎಂಬ ಮೂವರು ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಒಂದೇ ಕಣದಲ್ಲಿ ರಾಶಿ ಮಾಡಲಾಗಿತ್ತು. ಈ ಜಮೀನುಗಳನ್ನು ಶಿವರಾಜ ಕರಿಯಪ್ಪ ಉಜನಿ ಎಂಬ ರೈತ ಲಾವಣಿಗೆ ಪಡೆದು ಕೃಷಿ ಮಾಡುತ್ತಿದ್ದರು. ಕಿಡಿಗೇಡಿಗಳ ಈ ಕೃತ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳದ ತೆನೆರಾಶಿ ಸುಟ್ಟು ಕರಕಲಾಗಿದ್ದು, ರೈತರಿಗೆ ಭಾರಿ ನಷ್ಟ ಉಂಟಾಗಿದೆ.

ಮೆಕ್ಕೆಜೋಳದ ರಾಶಿಗೆ ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರು. ಈ ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

Edited By : Vinayak Patil
PublicNext

PublicNext

07/03/2026 10:32 pm

Cinque Terre

21.67 K

Cinque Terre

0

ಸಂಬಂಧಿತ ಸುದ್ದಿ