ರಾಮ ನಗರ : ರಸ್ತೆಗಾಗಿ ಗ್ರಾಮದ ಜನರು ಒತ್ತಾಯಿಸಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರೀಶ್ ಗೌಡ ಹಾಗೂ ಗ್ರಾಮಸ್ಥರು ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. ಸುಮಾರು ವರ್ಷಗಳಿಂದ ನಮಗೆ ರಸ್ತೆಯೇ ಇಲ್ಲ, ಚರಂಡಿ ವ್ಯವಸ್ಥೆ ಇದ್ದರೂ ಸಹ ರಸ್ತೆ ಕಾಮಗಾರಿಗೆ ಕೆಲವರು ವಿರೋಧ ಮಾಡುತ್ತಿದ್ದಾರೆ.
ಹಾಗಾಗಿ ನಮಗೆ ಬಹಳಷ್ಟು ಸಮಸ್ಯೆಯಾಗುತ್ತಿದೆ. ಹಾಗಾಗಿ ಆದಷ್ಟು ಬೇಗ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮವಹಿಸಿ ನಮಗೆ ರಸ್ತೆ ವ್ಯವಸ್ಥೆ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
PublicNext
08/03/2026 07:42 am
LOADING...