ಬೀದರ್: ಚಿಕ್ಕ ಮಕ್ಕಳನ್ನು ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ವ್ಯಸನದ ಕಡಿವಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, 16 ವರ್ಷದೊಳಗಿನ ಮಕ್ಕಳು ಇನ್ಮುಂದೆ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಸೇರಿದಂತೆ ಇತರ ಯಾವುದೇ ಸಾಮಾಜಿಕ ಜಾಲತಾಣ ಬಳಸದಂತೆ ನಿಷೇಧಿಸಿರುವುದನ್ನು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಅಧ್ಯಕ್ಷ, ಶಿಕ್ಷಣ ಪ್ರೇಮಿ ಡಾ.ಅಬ್ದುಲ್ ಖದೀರ್ ಸ್ವಾಗತಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ವತಿಯಿಂದ ಮಾದಕ ವಸ್ತುಗಳ ಬಳಕೆ ಹಾಗೂ ಮೊಬೈಲ್ ಬಳಕೆಯಿಂದಾಗುವ ಡಿಜಿಟಲ್ ವ್ಯಸನದ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್‌ನಲ್ಲಿ ಈ ಮೊಬೈಲ್ ಬಳಕೆಯಿಂದ ಮಕ್ಕಳಿಗಾಗುವ ದುಷ್ಪರಿಣಾಮವನ್ನು ಗಮನಿಸಿ ಸಾಮಾಜಿಕ ಜಾಲತಾಣಗಳಿಗೆ ನಿಷೇಧ ಹೇರಿರುವುದು ಸಂತಸ ಸಂಗತಿ. ಆದ್ರೆ, ಮಾದಕ ವಸ್ತುಗಳ ಅಡಿಕ್ಷನ್‌ನಿಂದ ಮಕ್ಕಳಲ್ಲಾಗುವ ದುಷ್ಪರಿಣಾಮದ ಬಗ್ಗೆಯೂ ಸರ್ಕಾರ ಗಮನಹರಿಸಿ ಶಿಕ್ಷಣ,ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ..
PublicNext
08/03/2026 07:49 am
LOADING...