ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇತಿಹಾಸ, ಸಂಸ್ಕೃತಿ ಅರಿಯಲು ಐದು ದಿನಗಳ ಉಚಿತ ಪಯಣ

ಯಾದಗಿರಿ: ವಿದ್ಯಾರ್ಥಿಗಳಲ್ಲಿ ಜ್ಞಾನ ಮತ್ತು ಸಾಂಸ್ಕೃತಿಕ ಅರಿವನ್ನು ಹೆಚ್ಚಿಸುವ ಮಹತ್ವದ ಉದ್ದೇಶದಿಂದ ಶಿಕ್ಷಣ ಇಲಾಖೆ ವಿನೂತನ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ರಾಜ್ಯದ ಇತಿಹಾಸ ಮತ್ತು ಸಂಸ್ಕೃತಿ ಪರಿಚಯಿಸುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯ 491 ವಿದ್ಯಾರ್ಥಿಗಳಿಗೆ 'ಕರ್ನಾಟಕ ದರ್ಶನ' ಶೀರ್ಷಿಕೆಯಡಿ ಐದು ದಿನಗಳ ಉಚಿತ ಪ್ರವಾಸವನ್ನು ಶಿಕ್ಷಣ ಇಲಾಖೆ ಆಯೋಜಿಸಿದೆ. ಈ ವಿಶೇಷ ಪ್ರವಾಸದಲ್ಲಿ ಯಾದಗಿರಿ, ಗುರುಮಠಕಲ್, ಶಹಾಪುರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಶಿಕ್ಷಣ ಇಲಾಖೆಯ ಈ ಕಾರ್ಯಕ್ಕೆ ಪ್ರವಾಸೋದ್ಯಮ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಕೂಡಾ ಕೈಜೋಡಿಸಿವೆ. ಪ್ರವಾಸಕ್ಕೆ ಹೊರಡುವ ಮುನ್ನ ಮಕ್ಕಳಿಗೆ ಬ್ಯಾಗ್‌ಗಳು ಮತ್ತು ವೈದ್ಯಕೀಯ ಕಿಟ್‌ಗಳನ್ನು ವಿತರಿಸುವ ಮೂಲಕ ಐದು ದಿನಗಳ ಪ್ರವಾಸಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಸುರಕ್ಷಿತವಾಗಿ ತೆರಳಿ ರಾಜ್ಯದ ಐತಿಹಾಸಿಕ ಸ್ಥಳಗಳ ಬಗ್ಗೆ ಮಾಹಿತಿ ಪಡೆದು ಬರುವಂತೆ ಪೋಷಕರು ವಿದ್ಯಾರ್ಥಿಗಳಿಗೆ ಹಾರೈಸಿದರು.

Edited By : Manjunath H D
PublicNext

PublicNext

08/03/2026 09:12 am

Cinque Terre

16.49 K

Cinque Terre

0

ಸಂಬಂಧಿತ ಸುದ್ದಿ