ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಕೊಲೆ : ವಾರ್ಡನ್, ಸಹಪಾಠಿಗಳ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ಬಾಲಕ ಪರಾರಿ

ಬಳ್ಳಾರಿ : ಹಾಸ್ಟೆಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವಿದ್ಯಾರ್ಥಿಗಳ ನಡುವಿನ ಗಲಾಟೆಯ ವೇಳೆ ರಾಡ್‌ನಿಂದ ಹಲ್ಲೆ ಮಾಡಲಾಗಿದೆ.

9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ.

ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಕಬ್ಬಿಣದ ರಾಡ್ ನಿಂದ ಬಾಲಕ ಹಲ್ಲೆ ಮಾಡಿದ್ದಾನೆ. ವಾರ್ಡನ್ ಮತ್ತು ಹಲವು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Edited By : Manjunath H D
PublicNext

PublicNext

08/03/2026 11:11 am

Cinque Terre

23.69 K

Cinque Terre

2