ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಪದೇ ಪದೇ ನಡೆಯುತ್ತಿರುವ ಗೋವುಗಳ ಕಳ್ಳತನದಿಂದ ಆಕ್ರೋಶಗೊಂಡ ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ರಾತ್ರಿ ದಿಢೀರನೆ ರಸ್ತೆ ತಡೆ ನಡೆಸಿ ಪೋಲಿಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಗರದ ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಯಕರ್ತರು ಜಮಾಯಿಸಿದ್ದು, ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಾಗರ ನಗರದಲ್ಲಿ ಗೋ ಕಳ್ಳರ ಅಟ್ಟಹಾಸ ಮಿತಿಮೀರಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ನಗರದ ಟ್ಯಾಕ್ಸ ಕಛೇರಿ ಸಮೀಪ ಗೋವುಗಳನ್ನು ಕಳ್ಳತನ ಮಾಡಲಾಗಿತ್ತು. ಈ ಘಟನೆ ತಾಜಾ ಇರುವಾಗಲೇ ಕಳೆದ ನಾಲ್ಕು ದಿನಗಳ ಹಿಂದೆ ನಗರದ ವಿಜಯನಗರ ಬಡಾವಣೆಯಲ್ಲಿ ಗೋ ಕಳ್ಳತನ ನಡೆದಿದೆ, ಪೋಲಿಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂಬುದು ಕಾರ್ಯಕರ್ತರ ನೇರ ಆರೋಪ.
ಇದರಿಂದ ರೊಚ್ಚಿಗೆದ್ದ ಬಜರಂಗದಳ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ರಾತ್ರಿ ಬಿ.ಹೆಚ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಧರಣಿ ಆರಂಭಿಸಿದ್ದಾರೆ. ಶಿವಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆ ನಡೆಸಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
"ಪೋಲಿಸ್ ಇಲಾಖೆ ಕಳ್ಳರನ್ನು ಹಿಡಿಯುವಲ್ಲಿ ವಿಫಲವಾಗಿದೆ. ನಮಗೆ ಕೇವಲ ಭರವಸೆ ಬೇಡ, ಕೂಡಲೇ ಕ್ರಮ ಬೇಕು" ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲದೆ, ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳೇ (SP) ಬರಬೇಕು, ಅಲ್ಲಿಯವರೆಗೆ ನಾವು ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ .
Kshetra Samachara
09/03/2026 12:09 am
LOADING...