ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ : ಗುರುಕುಲ ಶಾಲೆಯ ವಿದ್ಯಾರ್ಥಿಯ ಸಾವಿಗೆ ನ್ಯಾಯ ಒದಗಿಸುವಂತೆ ಪ್ರತಿಭಟನೆ

ಬಳ್ಳಾರಿ : ಬಳ್ಳಾರಿಯ ಗುರುಕುಲ ಶಾಲೆಯ ವಿದ್ಯಾರ್ಥಿಯ ಸಾವಿಗೆ ನ್ಯಾಯ ಒದಗಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿ ನಗರದ ರಾಯಲ್ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟಿಸಿ ಡಿಸಿಗೆ ಮನವಿ ಸಲ್ಲಿಸಿದ್ರು.

ಬಳ್ಳಾರಿಯ ರಾಯಲ್ ವೃತ್ತದಲ್ಲಿ ಕೆಲಕಾಲ ಪ್ರತಿಭಟಿಸಿ, ನಂತರ ರ್ಯಾಲಿ ಮೂಲಕ ಡಿಸಿ ಕಚೇರಿಗೆ ತಲುಪಿ ವಿದ್ಯಾರ್ಥಿ ಸಾವಿಗೆ ನ್ಯಾಯ ಬೇಕೆಂದು ಆಗ್ರಹಿಸಿದರು. ಗುರುಕುಲ ವಸತಿ ಶಾಲೆಯ ಸಹಪಾಠಿಯಿಂದ ವಿದ್ಯಾರ್ಥಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಲ್ಲಿ 7 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ.

ಒಬ್ಬ ವಿದ್ಯಾರ್ಥಿಯು ಸಾವನ್ನಪ್ಪಿದ್ದಾನೆ. ಇದು ಅತ್ಯಂತ ಕಳವಳಕಾರಿಯಾದ ಸಂಗತಿಯಾಗಿದೆ. ಒಬ್ಬ ಅಮಾಯಕ ವಿದ್ಯಾರ್ಥಿಯ ಸಾವಿಗೆ ಹೊಣೆ ಯಾರಾಗುತ್ತಾರೆ? ವಸತಿ ನಿಲಯದಲ್ಲಿ ನಿಲಯಪಾಲಕರು ಇಲ್ಲ, ರಕ್ಷಣಾ ಸಿಬ್ಬಂದಿಯು ಇಲ್ಲ. ವಿದ್ಯಾರ್ಥಿಗಳಿಗೆ ರಕ್ಷಣೆ ನೀಡದೆ ವಸತಿ ನಿಲಯ ನಡೆಸುವುದು ಕಾನೂನುಬಾಹಿರ. ಕೂಡಲೇ ವಿದ್ಯಾರ್ಥಿಯ ಸಾವಿಗೆ ಕಾರಣರಾದವರನ್ನು ಹಾಗೂ ರಕ್ಷಣೆಯ ದೃಷ್ಟಿಯಿಂದ ನಿರ್ಲಕ್ಷ್ಯ ತೋರಿದ ಶಾಲೆಯ ಆಡಳಿತ ಮಂಡಳಿಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಒತ್ತಾಯಿಸಿದೆ.

Edited By :
PublicNext

PublicNext

09/03/2026 04:38 pm

Cinque Terre

13.64 K

Cinque Terre

0