ಭಾಗ್ಯನಗರ : ರಸ್ತೆಯಲ್ಲಿ ಕಾರು ಚಲಿಸುತ್ತಿದ್ದಾಗ ನೋಡ ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡ ಕಾರು. ಕಾರು ಚಲಾಯಿಸುತ್ತಿದ್ದ ಚಾಲಕ ಸಜೀವ ದಹನ ಆಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಆಚೆಪಲ್ಲಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡ ಕಾರಿನಲ್ಲಿದ್ದ ಪೆನುಮಲೆ ಗ್ರಾಮದ 70 ವರ್ಷದ ಉದಯ ಕುಮಾರ್ ಮೃತ ಪಟ್ಟಿದ್ದಾನೆ.
ನಿನ್ನೆ ರಾತ್ರಿ ತಮ್ಮ ಊರಿಗೆ ಹಿಂತಿರುಗುತ್ತಿದ್ದಾಗ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ. ಬೆಂಕಿಯಲ್ಲಿ ಸಿಲುಕಿ ಉದಯ ಕುಮಾರ್ ಸಾವನ್ನಪ್ಪಿದ್ದಾನೆ. ಈ ಘಟನೆ ವಿಷಯ ತಿಳಿದ ತಕ್ಷಣ ಬಾಗೇಪಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಳ್ಳಲಾಗಿದೆ.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
09/03/2026 05:45 pm
LOADING...