ಬಳ್ಳಾರಿ : ಗಣಿನಗರಿ ಬಳ್ಳಾರಿಯಲ್ಲಿ ಖಾಸಗಿ ವಸತಿ ಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಮಲಗಿರುವ ತನ್ನ ಸಹಪಾಠಿಗಳ ಮೇಲೆ ಹಲ್ಲೆ ಮಾಡಿ ಓರ್ವನ ಸಾವಿಗೂ ಕಾರಣನಾಗಿದ್ದ. ಘಟನೆ ನಡೆದ ಬಳಿಕ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೊನ್ನೆ (ಮಾ.7ರಂದು) ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿ ಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ. ಕೊಲೆ ಆರೋಪಿ ಬಾಲಕನಿಗೆ ವೈದ್ಯರ ಮೂಲಕ ಕೌನ್ಸಿಲಿಂಗ್ ಮಾಡಿಸಿ ಘಟನೆಗೆ ಕಾರಣ ಹುಡುಕುವ ಪ್ರಯತ್ನವನ್ನು ಪೊಲೀಸರು ಮಾಡ್ತಿದ್ದಾರೆ ಎಂದು ಬಳ್ಳಾರಿ ವಲಯದ ಐಜಿಪಿ ಡಾ. ಹರ್ಷ ತಿಳಿಸಿದ್ದಾರೆ..
PublicNext
09/03/2026 06:44 pm
LOADING...