ಬೆಳಗಾವಿ: ಕರ್ನಾಟಕ ಉಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿ ಹಾಗೂ ಬೆಳಗಾವಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಜಸ್ಟಿಸ್ ಜಯಂತ್ ಬ್ಯಾನರ್ಜಿ ಅವರು ನಗರದ ಟಿಳಕವಾಡಿಯ ಕೆಎಲ್‌ಎಸ್ ಹೈಸ್ಕೂಲ್‌ನಲ್ಲಿ ಸೋಮವಾರ (ಮಾ.9) ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕತೆ ನಿಷೇಧ" ಕುರಿತ ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ಉದ್ಘಾಟಿಸಿದರು.
ತದನಂತರ ಮಾತನಾಡಿದ ಅವರು ಮಕ್ಕಳು ದೇಶದ ಭವಿಷ್ಯವಾಗಿದ್ದು, ವಿದ್ಯಾರ್ಥಿಗಳಲ್ಲಿ ಬಾಲ್ಯದಲ್ಲಿಯೇ ಕಾನೂನು ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ತಡೆ, ಬಾಲಕಾರ್ಮಿಕತೆ ನಿರ್ಮೂಲನೆ ಸೇರಿದಂತೆ ವಿವಿಧ ಸಾಮಾಜಿಕ ಅನಿಷ್ಠಗಳ ಬಗ್ಗೆ ಅರಿವು ಮೂಡಿಸಿದರೆ ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ನ್ಯಾಯ ಸಮ್ಮತ ಮತ್ತು ಕಾನೂನು ಬದ್ಧ ಸಮಾಜ ನಿರ್ಮಾಣಕ್ಕೆ ಸಹಕರಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲೆಯಾದ್ಯಂತ ಅನೇಕ ಶಾಲೆಗಳಲ್ಲಿ ಒಂದೇ ಸಮಯದಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ಅವರ ಪ್ರಯತ್ನವನ್ನು ಅವರು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತರಾದ ಬೋರಸೆ ಭೂಷಣ ಗುಲಾಬರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಲೀಲಾವತಿ ಹಿರೇಮರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕ ಚೇತನಕುಮಾರ್, ಡಯೆಟ್ ಪ್ರಾಂಶುಪಾಲ ಅಶೋಕ್ ಸಿಂದಗಿ, ಕೆಎಲ್‌ಎಸ್ ಹೈಸ್ಕೂಲ್ ಮುಖ್ಯ ಶಿಕ್ಷಕಿ ಲಕ್ಷ್ಮಿ ದೇಶಪಾಂಡೆ ಉಪಸ್ಥಿತರಿದ್ದರು.
PublicNext
09/03/2026 07:51 pm
LOADING...