ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಗೃಹಬಳಕೆ ಸಿಲಿಂಡರ್‍ ಗಳನ್ನು ವಾಣಿಜ್ಯ ಉಪಯೋಗಕ್ಕೆ ಬಳಸುವವರ ವಿರುದ್ದ ಕಾನೂನು ಕ್ರಮ : ಜಿಲ್ಲಾಧಿಕಾರಿ ಶ್ರೀರೂಪ 

ಚಾಮರಾಜನಗರ : ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್ ಗಳನ್ನು ವಾಣಿಜ್ಯ ಉಪಯೋಗಕ್ಕಾಗಿ ಬಳಸುತ್ತಿರುವವರ ವಿರುದ್ದ ಕಾನೂನು ರಿತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ರೆಸಾರ್ಟ್, ಹೋಟೆಲ್ ಮತ್ತು ಫಾಸ್ಟ್ ಫುಡ್ ಸೆಂಟರ್ ಹಾಗೂ ಟೀ ಅಂಗಡಿಗಳಲ್ಲಿ ಗೃಹಬಳಕೆ ಸಿಲಿಂಡರ್‌ ಗಳನ್ನು ವಾಣಿಜ್ಯ ಉಪಯೋಗಕ್ಕಾಗಿ ಬಳಸುತ್ತಿರುವವರ ವಿರುದ್ದ ದಿ ಲಿಕ್ವಿ ಫೈಡ್ ಪೆಟ್ರೋಲಿಯಂ ಗ್ಯಾಸ್ ರೆಗ್ಯೂಲೇಷನ್ ಆಫ್ ಸಪ್ಲೈ ಅಂಡ್ ಡಿಸ್ಟ್ರಿಬ್ಯೂಷನ್ 2000ರ ನಿಯಮ ಕಲಂ 3(1) (ಸಿ)ಯ ಉಲ್ಲಂಘನೆ ಆದೇಶದ ಮೇರೆಗೆ ಸಿಲಿಂಡರ್‌ ಗಳನ್ನು ವಶಪಡಿಸಿಕೊಳ್ಳಲಾಗುವುದು. ಇಂತಹ ಸಿಲಿಂಡರ್ ಅನ್ನು ಮುಟ್ಟುಗೋಲು ಹಾಕಿಕೊಂಡು ಅವರ ವಿರುದ್ದ ಕಾನೂನು ರಿತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

10/03/2026 06:17 pm

Cinque Terre

960

Cinque Terre

0