ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀಡಿಯಲ್ಲಿ ಗುರುಭವನ ಲೋಕಾರ್ಪಣೆ, ಗುರು ಜೀವನದಲ್ಲಿ ಅತ್ಯವಶ್ಯಕ - ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ಖಾನಾಪುರ: ಬದುಕಿನಲ್ಲಿ ಅಜ್ಞಾನ, ದಾರಿದ್ರ್ಯ ಮತ್ತು ಬಡತನ ದೂರವಾಗಬೇಕಾದರೆ ಗುರುವಿನ ಮಾರ್ಗದರ್ಶನ ಅತ್ಯವಶ್ಯಕ ಎಂದು= ಹೇಳಿದರು.

ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶ್ರೇಷ್ಠ ಶಿಕ್ಷಕ ಚಂದ್ರಶೇಖರ ಹೊಸೂರ ಅವರ 30ನೇ ಪುಣ್ಯಸ್ಮರಣೆ ಹಾಗೂ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ನಿರ್ಮಿಸಲಾದ ನೂತನ ಗುರುಭವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯಂತ ಉನ್ನತ ಸ್ಥಾನವಿದೆ. ಗುರು ಎಂದರೆ ದೇವರಿಗಿಂತಲೂ ಶ್ರೇಷ್ಠ ಎಂದು ನಮ್ಮ ಪೂರ್ವಜರು ಹೇಳಿದ್ದಾರೆ. ಲೌಕಿಕ ಬದುಕು ಸುಖಮಯವಾಗಲು ಹಾಗೂ ಆಧ್ಯಾತ್ಮಿಕ ಸಾಧನೆಯಲ್ಲಿ ಮುಂದುವರೆಯಲು ಗುರುವಿನ ಮಾರ್ಗದರ್ಶನ ಅಗತ್ಯ. ಗುರುವಿಲ್ಲದೆ ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸಿಕೊಳ್ಳುವುದು ಸಾಧ್ಯವಿಲ್ಲ. ನಮ್ಮಲ್ಲಿನ ಅಜ್ಞಾನ ಮತ್ತು ದಾರಿದ್ರ್ಯ ದೂರವಾಗಲು ಗುರುವಿನ ಆಶೀರ್ವಾದ ಅತ್ಯಂತ ಅಗತ್ಯ ಎಂದು ಅವರು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ನಮ್ಮ ಬದುಕಿಗೆ ವಿದ್ಯೆ ಕಲಿಸಿದ ಗುರುಗಳು ಹಾಗೂ ಜನ್ಮ ನೀಡಿದ ತಂದೆ-ತಾಯಿ ಎಂದೆಂದಿಗೂ ದೈವಸ್ವರೂಪರಾಗಿದ್ದಾರೆ. ಅವರನ್ನು ಸದಾ ಗೌರವದಿಂದ ಕಾಣಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಬೀಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆಧ್ಯಾತ್ಮಿಕ ಜ್ಞಾನ ನೀಡುವ ಉದ್ದೇಶದಿಂದ ಗುರುಭವನ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರ ಮೂಲಕ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಮಹಾಸ್ವಾಮಿಗಳು, ಅವರೊಳ್ಳಿ ಬೆಳಕಿ ರುದ್ರಸ್ವಾಮಿ ಮಠದ ಚನ್ನಬಸವ ದೇವರು ಹಾಗೂ ಕಮತೇನಟ್ಟಿಯ ಗುರುದೇವ ದೇವರು ನೇತೃತ್ವ ವಹಿಸಿದ್ದರು.

ವೇದಿಕೆಯ ಮೇಲೆ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಿ. ಚಂದ್ರಶೇಖರ ಹೊಸೂರ ಅವರ ಸಹೋದ್ಯೋಗಿಗಳು ಹಾಗೂ ಐಎಫ್ಎಸ್ ಅಧಿಕಾರಿ ಗಿರೀಶ ಹೊಸೂರ ಅವರ ವಿದ್ಯಾಗುರುಗಳಿಗೆ ಗುರುವಂದನೆ ಸಲ್ಲಿಸಲಾಯಿತು. ಇದಕ್ಕೂ ಮೊದಲು ಅಯ್ಯಪ್ಪ ಮಂದಿರದಿಂದ ಗುರುಭವನದವರೆಗೆ ನಡೆದ ಭವ್ಯ ಮೆರವಣಿಗೆ ಗಮನ ಸೆಳೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಐಎಫ್ಎಸ್ ಅಧಿಕಾರಿ ಗಿರೀಶ ಹೊಸೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶೇಖರ ಪಾಟೀಲ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Edited By : Manjunath H D
PublicNext

PublicNext

10/03/2026 06:26 pm

Cinque Terre

16 K

Cinque Terre

0

ಸಂಬಂಧಿತ ಸುದ್ದಿ