ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಆರಂಭವಾಗಬೇಕಿದ್ದ ಮುಷ್ಕರವನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಿಂಪಡೆದುಕೊಂಡಿದೆ.
ನಾಳೆಯಿಂದ ರಾಜ್ಯಾದ್ಯಂತ ಕರೆ ನೀಡಿದ್ದ ವೈದ್ಯರ ಮುಷ್ಕರವನ್ನು ಹಿಂಪಡೆಯಲಾಗಿದೆ. 14 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಲಾಗಿದೆ. ಮೂರು ತಿಂಗಳಲ್ಲಿ ಎಲ್ಲಾ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ.
ರಾಜ್ಯ ಸರ್ಕಾರದ ಭರವಸೆ ಬೆನ್ನಲ್ಲೇ ವೈದ್ಯರು ಮುಷ್ಕರ ಹಿಂಪಡೆದುಕೊಂಡಿದ್ದಾರೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದರು. ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ನೌಕರರು, ಹೊರ ರೋಗಿಗಳ ವಿಭಾಗ(ಒಪಿಡಿ) ಕರ್ತವ್ಯ ಸ್ಥಗಿತಗೊಳಿಸುವುದಾಗಿ ಹೇಳಲಾಗಿತ್ತು.
ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸುವಂತೆ ಎರಡು ವಾರದ ಹಿಂದೆಯೇ ಮುಷ್ಕರ ನಡೆಸುವ ನಿರ್ಧಾರ ಪ್ರಕಟಿಸಲಾಗಿದ್ದರೂ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರ ಕೈಗೊಳ್ಳಲಾಗಿತ್ತು.
ಒಟ್ಟಾರೆ ವೈದ್ಯರು ಮತ್ತು ಸರ್ಕಾರದ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. ನಾಳೆಯಿಂದ ಆರೋಗ್ಯ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಇರೋದಿಲ್ಲ. ಎಂದಿನಂತೆ ಸರ್ಕಾರಿ ಆಸ್ಪತ್ರೆ ಓಪಿಡಿಗಳು ಕಾರ್ಯ ನಿರ್ವಹಿಸಲಿವೆ.
PublicNext
10/03/2026 08:45 pm
LOADING...