ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೃತ ಜಲಜಾಕ್ಷಿ ಮನೆಗೆ ಮಾಜಿ ಶಾಸಕ‌ ರಂಜನ್ ಭೇಟಿ: ಕುಟುಂಬಕ್ಕೆ ಸಾಂತ್ವಾನ

ಕುಶಾಲನಗರ: ಕಾಡಾನೆ ದಾಳಿಯಿಂದ ಮೃತಪಟ್ಟ ವಾಲ್ನೂರು ತ್ಯಾಗತ್ತೂರು ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ ಅವರ ಬಾಳೆಗುಂಡಿ‌ ನಿವಾಸಕ್ಕೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕ ಆರ್ಥಿಕ ಸಹಕಾರ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಂಜನ್ ಕೊಡಗು ಜಿಲ್ಲೆಯಲ್ಲಿ ಕಾಡಾನೆ, ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿದೆ.

ಕಳೆದ ಎರಡು ತಿಂಗಳಲ್ಲಿ ಕೊಡಗಿನಲ್ಲಿ ಕಾಡಾನೆ ದಾಳಿಗೆ ನಾಲ್ವರು ಬಲಿಯಾಗಿರುವುದು ಆತಂಕದ ವಿಚಾರ. ನಮ್ಮ ಸರಕಾರದ ಅವಧಿಯಲ್ಲಿ ಅನುದಾನ ಕ್ರೋಡೀಕರಿಸಿ ಜಿಲ್ಲೆಯಲ್ಲಿ 350 ಕಿಮೀ ನಷ್ಟು ಆನೆ ಕಂದಕ ನಿರ್ಮಿಸಲಾಗಿದೆ. ಕೂಡಲೆ ಸರಕಾರ ಎಚ್ಚೆತ್ತುಕೊಂಡು ಕಾಡಾನೆ, ವನ್ಯಜೀವಿ ಸಂಘರ್ಷ‌‌ ನಿಯಂತ್ರಣಕ್ಕೆ‌ ಕ್ರಮವಹಿಸಬೇಕಿದೆ ಎಂದರು.

ಈ ಸಂದರ್ಭ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ, ಕೊಡಗು ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಕೆ.ಚಂದ್ರ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್, ವಾಲ್ನೂರು ತ್ಯಾಗತ್ತೂರು ಗ್ರಾಪಂ ಮಾಜಿ ಸದಸ್ಯರಾದ ಭುವನ್, ಗಣೇಶ್, ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ.ಮುರಳಿ‌ಮಾದಯ್ಯ, ಕುಶಾಲನಗರ ಎಪಿಎಂಸಿ ಮಾಜಿ ಉಪಾಧ್ಯಕ್ಷ ವಿಜಯ ಜತ್ತ ಮತ್ತಿತರರು ಇದ್ದರು.

Edited By : PublicNext Desk
Kshetra Samachara

Kshetra Samachara

11/03/2026 07:00 am

Cinque Terre

300

Cinque Terre

0

ಸಂಬಂಧಿತ ಸುದ್ದಿ