ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಪ್ಲೋಮಾ ವಿದ್ಯಾರ್ಥಿ ಆತ್ಮಹತ್ಯೆ: ಬಳ್ಳಾರಿಯಲ್ಲಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಆಕ್ರೋಶ

ಬಳ್ಳಾರಿ : ಬಳ್ಳಾರಿ ನಗರದ ಸಂಜಯ್ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆತಂಕ ಮೂಡಿಸಿದೆ.

ಗುಗ್ಗರಹಟ್ಟಿಯ ನಿವಾಸಿಯಾದ ಅರವಿಂದ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಿನ್ನೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ಜಗಳವಾಗಿದ್ದು, ಈ ವೇಳೆ ಕಾಲೇಜಿನ ಪ್ರೊಫೆಸರ್ ಹಾಗೂ ಎಚ್‌ಒಡಿ ಪೋಷಕರನ್ನು ಕರೆಸಿ ಅರವಿಂದನನ್ನು ಬೈದಿದ್ದಾರೆ ಎಂದು ತಿಳಿದುಬಂದಿದೆ.

“ಇಂತಹ ಗಲಾಟೆ ಮಾಡುವ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ, ಇದು ಲಾಸ್ಟ್ ವಾರ್ನಿಂಗ್” ಎಂದು ಶಿಕ್ಷಕರು ಎಚ್ಚರಿಕೆ ನೀಡಿದ್ದರೆಂದು ಹೇಳಲಾಗುತ್ತಿದೆ.

ಈ ಘಟನೆ ಮನಸ್ಸಿಗೆ ಬೇಸರ ಉಂಟುಮಾಡಿದ ಹಿನ್ನೆಲೆಯಲ್ಲಿ ಅರವಿಂದ ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದಕ್ಕೆ ಎಚ್‌ಒಡಿ ಹಾಗೂ ಶಿಕ್ಷಕರ ಬೈಗುಳವೇ ಕಾರಣ ಎಂದು ಆರೋಪಿಸಿ ಇಂದು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಶ್ರದ್ಧಾಂಜಲಿ ಸಭೆ ಬಳಿಕ ರೊಚ್ಚಿಗೆದ್ದ ವಿದ್ಯಾರ್ಥಿಗಳು ಕುರ್ಚಿ, ಟೇಬಲ್ ಒಡೆದು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು. ಘಟನೆ ತಿಳಿದ ತಕ್ಷಣ ಬ್ರೂಸ್ ಪೇಟ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

Edited By :
PublicNext

PublicNext

11/03/2026 02:56 pm

Cinque Terre

9.19 K

Cinque Terre

0

ಸಂಬಂಧಿತ ಸುದ್ದಿ