ಹಾಸನ : ಹಾಸನ ಜಿಲ್ಲೆಯ ಕೌಶಿಕ ಗ್ರಾಮದ ಅಂತರ್ಜಲ ಕೈಗಾರಿಕಾ ತ್ಯಾಜ್ಯದಿಂದ ಕಲುಷಿತಗೊಂಡಿರುವುದು ದೃಢಪಟ್ಟರೆ, ಕೇಂದ್ರದಿಂದ ವಿಶೇಷ ತಂಡ ಕರೆಯಿಸಿ ಮರುಪರಿಶೀಲನೆ ನಡೆಸಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸದನಕ್ಕೆ ತಿಳಿಸಿದರು.
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಸೂರಜ್ ರೇವಣ್ಣ, ಕೌಶಿಕ ಗ್ರಾಮದ ಕೊಳವೆ ಬಾವಿಗಳಿಗೆ ಕೈಗಾರಿಕಾ ತ್ಯಾಜ್ಯ ಸೇರುತ್ತಿದೆ ಎಂದು ಆರೋಪಿಸಿ, ತಾವು ತಂದಿದ್ದ ಕಲುಷಿತ ನೀರಿನ ಬಾಟಲಿಯನ್ನು ಸದನದಲ್ಲಿ ಪ್ರದರ್ಶಿಸಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವರು, ಆ ನೀರಿನ ಮಾದರಿಯನ್ನು ಪರೀಕ್ಷಿಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
PublicNext
11/03/2026 05:36 pm
LOADING...