ಸಕಲೇಶಪುರ: ತಾಲ್ಲೂಕಿನ ಬಾಗೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಟ್ರ್ಯಾಕ್ಟರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಟ್ರಾಕ್ಟರ್ ರಸ್ತೆ ಮಧ್ಯೆಯೇ ಪಲ್ಟಿಯಾಗಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಬಾಗೆ ಸಮೀಪದ ತಿರುವಿನಲ್ಲಿ ಟ್ರ್ಯಾಕ್ಟರ್ ಮತ್ತು ಟಿಪ್ಪರ್ ಪರಸ್ಪರ ಡಿಕ್ಕಿಯಾಗಿದ್ದು, ಡಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ಪರಿಣಾಮವಾಗಿ ಮಂಗಳೂರು-ಬೆಂಗಳೂರು ಸಂಪರ್ಕಿಸುವ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ದಟ್ಟಣೆ ಉಂಟಾಗಿತ್ತು.
Kshetra Samachara
11/03/2026 05:38 pm
LOADING...