ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಸರ್ಕಾರಕ್ಕೆ ದಯಾನಂದ ಸ್ವಾಮೀಜಿ ಸ್ಪೆಷಲ್ ರಿಕ್ವೆಸ್ಟ್!

ಮೈಸೂರು: ಕೆ.ಆರ್.ನಗರ ತಾಲೂಕಿನ ಕಪ್ಪಡಿಯ ಶ್ರೀ ರಾಚಪ್ಪಾಜಿ ಜಾತ್ರೆಯು ಶಿವರಾತ್ರಿಯಿಂದ ಆರಂಭಗೊಂಡಿದ್ದು ಯುಗಾದಿಯವರೆಗೆ ಜರುಗಲಿದೆ.

ಸುಮಾರು ಒಂದು ತಿಂಗಳ ಕಾಲ ನಡೆಯುವ ಈ ಜಾತ್ರೆಗೆ ಸಹಸ್ರಾರು ಭಕ್ತರು ಆಗಮಿಸಿ ದೇವರಿಗೆ ಪೂಜಾದಿ ಧಾರ್ಮಿಕ ಸೇವಾ ಕೈಂಕರ್ಯಗಳನ್ನು ಸಲ್ಲಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಹಲವು ಭಕ್ತರು ದೇವರು ಮತ್ತು ಧರ್ಮದ ಹೆಸರಿನಲ್ಲಿ ಹರಕೆಯ ರೂಪದಲ್ಲಿ ಆಡು, ಕುರಿ, ಕೋಳಿ ಮುಂತಾದ ಪ್ರಾಣಿಗಳ ಬಲಿ ನೀಡಲಿದ್ದು, ಇದು ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಬಂಧಕ ಅಧಿನಿಯಮ 1959 ಮತ್ತು ನಿಯಮಗಳು 1963 ಹಾಗೂ ತಿದ್ದುಪಡಿ ಕಾಯ್ದೆ 1975ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.

ಈ ಪ್ರಾಣಿಬಲಿಯನ್ನು ಮೇಲ್ಕಂಡ ಕಾನೂನು ಹಾಗೂ ಕರ್ನಾಟಕ ಹೈಕೋರ್ಟ್ ಆದೇಶಗಳ ಅಡಿಯಲ್ಲಿ ಸಂಪೂರ್ಣವಾಗಿ ತಡೆಗಟ್ಟಬೇಕು ಎಂದೂ ಹಾಗೂ ಪ್ರಾಣಿಗಳನ್ನು ಜಾತ್ರಾ ಪರಿಸರಕ್ಕೆ ಬಾರದಂತೆ ಕಟ್ಟೆಚ್ಚರ ವಹಿಸಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾಸಂಘ ಹಾಗೂ ಬಸವ ಧರ್ಮಜ್ಞಾನ ಪೀಠದ ಅಧ್ಯಕ್ಷರಾದ ಶ್ರೀ ದಯಾನಂದ ಸ್ವಾಮೀಜಿಯವರು ಕರ್ನಾಟಕ ಸರ್ಕಾರ, ಮೈಸೂರು ಜಿಲ್ಲಾಡಳಿತ ಮತ್ತು ಕೆ.ಆರ್. ನಗರ ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

Edited By : Manjunath H D
PublicNext

PublicNext

11/03/2026 10:29 pm

Cinque Terre

9.98 K

Cinque Terre

0

ಸಂಬಂಧಿತ ಸುದ್ದಿ