ಬೀದರ್ : ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಬಗದೂರಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಆಗಿದೆ.
ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಂಚಾಯತ್ ಆವರಣದಲ್ಲಿ ಕೊಡಗಳನ್ನು ಪ್ರದರ್ಶಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು.
ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ಸುಡು ಬಿಸಿಲಿನಲ್ಲಿ ಕಿಲೋ ಮೀಟರ್‌ಗಟ್ಟಲೆ ದೂರ ಹೋಗಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು.
ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕು. ಜೊತೆಗೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು...
PublicNext
11/03/2026 10:39 pm
LOADING...