ಹೊಸಪೇಟೆ : ವಿಜಯನಗರ ಜಿಲ್ಲೆಯ ಸರ್ಕಾರಿ ಸರಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದ್ವಿಭಾಷಾ ಮಾಧ್ಯಮ LKG ಮತ್ತು UKG ಅತಿಥಿ ಶಿಕ್ಷಕರಿಗೆ ಕಳೆದ ಒಂಬತ್ತು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದs ಬೇಸತ್ತ ಅತಿಥಿ ಉಪನ್ಯಾಸಕರು, ಜಿಲ್ಲಾಧಿಕಾರಿ, DDPI ವೇತನ ಪಾವತಿಗಾಗಿ ಮನವಿ ಸಲ್ಲಿಸಲಾಯಿತು.
ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಅತಿಥಿ ಶಿಕ್ಷಕರು ರೊಚ್ಚಿಗೆದ್ದಿದ್ದಾರೆ. ಅತಿಥಿ ಶಿಕ್ಷಕರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಅತಿಥಿ ಉಪನ್ಯಾಸಕ ಶಿಕ್ಷಕ ಸಂಘಟನೆ ಮುಖಂಡ ರವಿಶಂಕರ್, ಕಡಿಮೆ ವೇತನದಲ್ಲೂ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇವೆ. ಅತಿಥಿ ಶಿಕ್ಷಕರಿಗೆ ಸಕಾಲದಲ್ಲಿ ವೇತನ ನೀಡದಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಾಯಂ ಶಿಕ್ಷಕರಷ್ಟೇ ಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರು ಇಂದು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಒಂದು ರೂಪಾಯಿ ಕೂಡ ಸಂಭಾವನೆ ಸಂದಾಯವಾಗಿಲ್ಲ. ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ, ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡುತ್ತೇವೆ ಅಂತ ಸರ್ಕಾರಕ್ಕೆ ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದರು.
PublicNext
12/03/2026 11:09 am
LOADING...