ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾನವ-ಪ್ರಾಣಿ ಸಂಘರ್ಷ ತಡೆಗೆ ಸರ್ಕಾರದ ಕ್ರಮಗಳೇನು?

ಬೆಂಗಳೂರು : ಮಂಡ್ಯ ಜಿಲ್ಲೆಯ ಮಳವಳ್ಳಿ ಭಾಗದಲ್ಲಿ ಆನೆ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, 9.38 ರೂ.ಗಳ ವೆಚ್ಚದಲ್ಲಿ ಐದುವರೆ ಕಿ.ಮೀ. ಉದ್ದನೆಯ ರೈಲ್ವೆ ಬ್ಯಾರಿಕೇಡ್ ಅನ್ನು ನಿರ್ಮಿಸಲಾಗುತ್ತಿದೆ ಎಂದು ಅರಣ್ಯ ಮತ್ತು ಭೂ-ವಿಜ್ಞಾನ, ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಆನೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ವಿವಿಧೆಡೆ ಸೇರಿದಂತೆ ಒಟ್ಟು 116 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿ ನಿರ್ಮಾಣ ಹಂತದಲ್ಲಿದೆ ಎಂದರು.

ಮಳವಳ್ಳಿ ಶಾಸಕ ಎಂ.ಪಿ.ನರೇಂದ್ರಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ತಡೆಗೆ ಎಲ್ಲ ರೀತಿಯ ಅಗತ್ಯ ಮತ್ತು‌ ಆಧುನಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಮೈಸೂರು ಸೇರಿದಂತೆ ಮತ್ತಿತರೆಡೆಗಳಲ್ಲೂ ಮಾನವ ಮತ್ತು ಪ್ರಾಣಿಗಳ ನಡುವೆ ಸಂಘರ್ಷ ತೀವ್ರಗೊಂಡ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಏನೆಲ್ಲ ಕ್ರಮಗಳನ್ನು ತೆಗೆದುಕೊಂಡಿದೆ? ಎಂದು ಶಾಸಕ ಎಂ.ಪಿ.ನರೇಂದ್ರ ಸ್ವಾಮಿ ಅವರು ಪ್ರಶ್ನೆ ಕೇಳಿದ್ದರು.

Edited By : Abhishek Kamoji
PublicNext

PublicNext

12/03/2026 05:15 pm

Cinque Terre

5.9 K

Cinque Terre

0

ಸಂಬಂಧಿತ ಸುದ್ದಿ