ಮೈಸೂರು : ಮೈಸೂರು ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಯಾವುದೇ ತೊಂದರೆಯಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ಯಾಸ್ ಸರಬರಾಜು ಸಂಸ್ಥೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಗೃಹ ಬಳಕೆ ಗ್ಯಾಸ್‌ಗೆ ಯಾವುದೇ ತೊಂದರೆಯಿಲ್ಲ , ಸುಖ ಸುಮ್ಮನೆ ಜನರು ಆತಂಕ ಪಡುವ ಅಗತ್ಯವಿಲ್ಲ, ಜನರು ಅಡ್ವಾನ್ಸ್ ಬುಕ್ಕಿಂಗ್ ಮಾಡಿಕೊಳ್ಳುತ್ತಿದ್ದಾರೆ ಅಷ್ಟೇ, ಇದನ್ನೇ ಬಂಡವಾಳ ಮಾಡಿಕೊಂಡು ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡುವುದು ಕಂಡರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ವಾಣಿಜ್ಯ ಗ್ಯಾಸ್ ಸ್ವಲ್ಪ ದಿನದವರೆಗೆ ಸಿಗೋದಿಲ್ಲ, ಉಳಿದಂತೆ ದೇವಸ್ಥಾನ , ಹಾಸ್ಟೆಲ್, ಅಂಗನವಾಡಿ ಎಲ್ಲ ಕಡೆಗೂ ಗ್ಯಾಸ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Kshetra Samachara
12/03/2026 10:48 pm
LOADING...