ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಜೈಲಿನಿಂದ ಹೊರಬಂದ ಶಾಸಕ ಲಮಾಣಿ - ಮುನೇಶ್ವರ ಸ್ವಾಮಿ ದರ್ಶನ, ಕಾರ್ಯಕರ್ತರ ಜಯಘೋಷ!

ಬೆಂಗಳೂರು : ಗುತ್ತಿಗೆದಾರರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿದ್ದ ಶಾಸಕ ಡಾ. ಚಂದ್ರು ಲಮಾಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಲಮಾಣಿ ಅವರಿಗೆ ದೊಡ್ಡ ರಿಲೀಫ್ ದೊರೆತಂತಾಗಿದೆ.

ಜೈಲಿನಿಂದ ಹೊರಬಂದ ಬಳಿಕ ಶಾಸಕ ಡಾ. ಚಂದ್ರು ಲಮಾಣಿ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಶಾಸಕರು ಬಿಡುಗಡೆಯಾದ ಹಿನ್ನೆಲೆ ಜೈಲಿನ ಬಳಿ ಜಮಾಯಿಸಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರಿಗೆ ಸ್ವಾಗತ ಕೋರಿದರು.

Edited By : Shivu K
PublicNext

PublicNext

12/03/2026 10:50 pm

Cinque Terre

18.62 K

Cinque Terre

0