ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ : 30 ವರ್ಷಗಳಿಂದ ಅನುದಾನವಿಲ್ಲ: ಕನ್ನಡ ಶಾಲೆ ಉಳಿಸಲು ಖಾಸಗಿ ಸಂಸ್ಥೆಗಳ ಅಳಲು

ಯಾದಗಿರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯಾದಗಿರಿಯಲ್ಲಿ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ.

ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಡಿಜಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಒಕ್ಕೂಟದ ಉಪಾಧ್ಯಕ್ಷ ಶಾಂತರಡ್ಡಿ ಚೌದ್ರಿ ಮೊದಲಿನಿಂದಲೂ ನಾಡಿನಲ್ಲಿ ಮಠ, ಮಾನ್ಯಗಳು, ಖಾಸಗಿ ಸಂಸ್ಥೆಗಳು ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿರುವುದರಿಂದ ಸಮಾಜದಲ್ಲಿ ಅಪಾರ ಬದಲಾವಣೆ ಕಾಣುತ್ತಿದ್ದೇವೆ, ನಾವೆಲ್ಲರೂ ಮಾತೃಭಾಷೆ ಕನ್ನಡ ಶಾಲೆಗಳು ಉಳಿಸಿ- ಬೆಳೆಸಲು ಶ್ರಮಿಸುತ್ತಿದ್ದೇವೆ,

ಆದರೆ 30 ವರ್ಷಗಳಿಂದ ಸರ್ಕಾರದಿಂದ ಯಾವುದೇ ಅನುದಾನ ನೀಡಿಲ್ಲ, ಇದು ಯಾವ ನ್ಯಾಯ, ಪ್ರಸಕ್ತ ಸಾಲಿನಲ್ಲಿ ಒಂದು ಶಿಕ್ಷಣ ಸಂಸ್ಥೆ ನಡೆಸುವುದು ಸವಾಲಿನ ಕೆಲಸ ಆಗಿದೆ, ನಾವು ಹೊಲ ಮನೆ ಮಾರಾಟ ಮಾಡಿ ಶಿಕ್ಷಣ ಸಂಸ್ಥೆ ನಡೆಸುವಂತೆ ಸ್ಥಿತಿ ಒದಗಿ ಬಂದಿದೆ,

ಮುಖ್ಯಮಂತ್ರಿಗಳು ಕೂಡಲೇ ಸೂಕ್ತ ಅನುದಾನ ಬಿಡುಗಡೆ ಮಾಡಿ ಕನ್ನಡ ಶಾಲೆ ಉಳಿಸಲು ಸಹಕರಿಸಬೇಕೆಂದು ಆಗ್ರಹಿಸಿದ್ದಾರೆ.

Edited By :
PublicNext

PublicNext

13/03/2026 07:47 am

Cinque Terre

9.85 K

Cinque Terre

0

ಸಂಬಂಧಿತ ಸುದ್ದಿ