ವಿಜಯಪುರ: ಕಾಗವಾಡದಿಂದ ಶ್ರೀಶೈಲಕ್ಕೆ ಹೋಗುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವನ ಹಟ್ಟಿ ಕ್ರಾಸ್ ಬಳಿಯ ರಾಜ್ಯ ಬಿಜ್ಜಳ ಹೆದ್ದಾರಿಯಲ್ಲಿ ಸಂಭವಿಸಿದೆ.
ಚಂದ್ರವ್ವ ಟಕ್ಕೆನ್ನವರ (70) ಕಾಮಪ್ಪ ಅವರಾದಿ( 65) ಮೃತ ದುರ್ದೈವಿಗಳಾಗಿದ್ದಾರೆ.ಇನ್ನೂ ಕಾರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪಿಐ ಗುರುಶಾಂತ ದಾಶ್ಯಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
PublicNext
13/03/2026 09:45 am
LOADING...