ಬೀದರ್ : ಬೇಸಿಗೆ ಆರಂಭದಲ್ಲೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರುತ್ತಿದೆ. ಕಳೆದ ಎರಡು ತಿಂಗಳಿನಿಂದ ಭಾಲ್ಕಿ ತಾಲ್ಲೂಕಿನ ಬಸವನವಾಡಿ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ದಿನನಿತ್ಯದ ಬಳಕೆ ಹಾಗೂ ಕುಡಿಯುವ ನೀರಿಗಾಗಿ ಮಹಿಳೆಯರು ಮತ್ತು ವಯೋವೃದ್ಧರು ದೂರದೂರಿನಿಂದ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ಗ್ರಾಮ ಪಂಚಾಯಿತಿ ಪಿಡಿಒ, ತಾಲ್ಲೂಕು ಪಂಚಾಯ್ತಿ ಇಒ ಅವರ ಗಮನಕ್ಕೆ ಹಲವು ಬಾರಿ ತಂದಿದ್ದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಅಂತಾ ಕಿಡಿಕಾರಿದ್ದಾರೆ. ಇನ್ನು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಗ್ರಾಮಸ್ಥರೊಬ್ಬರು ತಾಲ್ಲೂಕು ಪಂಚಾಯ್ತಿ ಇಒ ಅವರಿಗೆ ಕರೆ ಮಾಡಿದ್ರೆ, ಉಡಾಫೆ ಉತ್ತರ ನೀಡುತ್ತಿದ್ದಾರೆ. ಸುದ್ದಿ ಮಾಡಿದ್ರೆ ಮಾಧ್ಯಮದವರೇನು ನೀರು ಕೊಡ್ತಾರಾ ಅಂತಾ ಬೇಜವಾಬ್ದಾರಿತನದಿಂದ ಉತ್ತರಿಸಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
PublicNext
13/03/2026 11:51 am
LOADING...