ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ: ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಬಳ್ಳಾರಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

ಬಳ್ಳಾರಿ: ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ರಾಯಲ್ ವೃತ್ತದಲ್ಲಿ ಆಟೋದಲ್ಲಿ ಎಲ್‌ಪಿಜಿ ಸಿಲಿಂಡರ್ ನೇತುಹಾಕಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮೋದಿ ಭಾವಚಿತ್ರಕ್ಕೆ ಅಣಕು ಪ್ರದರ್ಶನ ಮಾಡಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಗಮನಿಸಿ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Edited By : Manjunath H D
PublicNext

PublicNext

13/03/2026 05:25 pm

Cinque Terre

10.82 K

Cinque Terre

0

ಸಂಬಂಧಿತ ಸುದ್ದಿ