ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: 10 ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಹಾವೇರಿ ನಗರದಲ್ಲಿ ನಡೆದಿದೆ. ಹಾವೇರಿ ನಗರದ ಟಿಎಂಎ ಕಾಲೇಜಿನಲ್ಲಿ ಘಟನೆ ನಡೆದಿದ್ದು 10 ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗಾಯಾಳು ವಿದ್ಯಾರ್ಥಿಗಳನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಟ್ಟಡ ಕಾಮಗಾರಿ ಮಾಡುವಾಗ ಏಕಾಏಕಿ ಎದ್ದ ಹೆಜ್ಜೇನುಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿವೆ.

6 ಜನ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿದ್ದ 4 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By : Vinayak Patil
Kshetra Samachara

Kshetra Samachara

13/03/2026 05:58 pm

Cinque Terre

15.08 K

Cinque Terre

0

ಸಂಬಂಧಿತ ಸುದ್ದಿ